15.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ತುರ್ತು ಕಾಮಗಾರಿಗಳ ಹಿನ್ನಲೆ ಜೂನ್‌ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಂಗಳೂರು ಜೂನ್‌ 16 : ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.

ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.

ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles