16 C
New York
Monday, September 28, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಡಿಜಿಟಲ್ ಕರ್ನಾಟಕ ಮತ್ತಷ್ಟು ಭದ್ರ: ಆಧಾರ್ ದೃಢೀಕರಣ ವ್ಯವಸ್ಥೆಯ ಹಾರ್ಡ್‌ವೇರ್ ಅಪ್‌ಗ್ರೇಡ್

ಬೆಂಗಳೂರು:
ಡಿಜಿಟಲ್ ಕರ್ನಾಟಕವನ್ನು ಇನ್ನಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಆಧಾರ್ ದೃಢೀಕರಣ ಸೇವೆಗಳಿಗೆ ಆಧಾರವಾಗಿರುವ ಹಾರ್ಡ್‌ವೇರ್ ಸೆಕ್ಯುರಿಟಿ ಮಾಡ್ಯೂಲ್ (HSM) ಅನ್ನು ಉನ್ನತೀಕರಿಸುತ್ತಿದೆ.
ಪ್ರತಿದಿನ ಸರಾಸರಿ 10 ರಿಂದ 12 ಲಕ್ಷ ಆಧಾರ್ ದೃಢೀಕರಣ ವಿನಂತಿಗಳನ್ನು ಈ ವ್ಯವಸ್ಥೆಯು ನಿರ್ವಹಿಸುತ್ತದೆ. ಈ ಪ್ರಮುಖ ವ್ಯವಸ್ಥೆಗೆ ಅತ್ಯಾಧುನಿಕ ಭದ್ರತಾ ತಂತ್ರಜ್ಞಾನಗಳನ್ನು ಅಳವಡಿಸುವುದರಿಂದ ಡಿಜಿಟಲ್ ಸೇವೆಗಳ ಭದ್ರತೆ, ವಿಶ್ವಾಸಾರ್ಹತೆ ಮತ್ತು ಒಟ್ಟಾರೆ ಕಾರ್ಯಕ್ಷಮತೆ ಇನ್ನಷ್ಟು ಬಲಗೊಳ್ಳಲಿದೆ ಎಂದು ಸರ್ಕಾರ ತಿಳಿಸಿದೆ.

ದಿನಾಂಕಗಳು:ಜುಲೈ 31, ಆಗಸ್ಟ್ 1 ಮತ್ತು ಆಗಸ್ಟ್ 2.
ಸಮಯ:ಪ್ರತಿದಿನ ಸಂಜೆ 6:00 ರಿಂದ ಬೆಳಗಿನ 6:00 ರವರೆಗೆ (ಕಚೇರಿ ಅವಧಿಯ ನಂತರ).

ಉದ್ದೇಶ: ಸಾರ್ವಜನಿಕರಿಗೆ ಯಾವುದೇ ರೀತಿಯ ಅನನುಕೂಲ ಅಥವಾ ಸೇವಾ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸಿ ಈ ತಾಂತ್ರಿಕ ಉನ್ನತೀಕರಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

ಸರ್ಕಾರದ ಆದ್ಯತೆ:
ಸುರಕ್ಷಿತ, ವಿಶ್ವಾಸಾರ್ಹ ಮತ್ತು ಭವಿಷ್ಯಕ್ಕೆ ಪೂರಕವಾದ ಸದೃಢ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ನಿರ್ಮಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ನಾಗರಿಕರ ಡಿಜಿಟಲ್ ಮಾಹಿತಿಯ ಭದ್ರತೆ ಹಾಗೂ ಸೈಬರ್ ಸಾಮರ್ಥ್ಯವನ್ನು ಬಲಪಡಿಸಲು ಮುಂಬರುವ ದಿನಗಳಲ್ಲೂ ಇಂತಹ ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles