16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ದೊಡ್ಡಬಳ್ಳಾಪುರದಲ್ಲಿ ಬರ ಅಧ್ಯಯನ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ ಜಿಲ್ಲೆ ಆ.06:- ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಗ್ರಾಮದ ರೈತರ ಜಮೀನುಗಳಿಗೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ ಜಮೀನುಗಳಿಗೆ, ಕೊಳೂರು ಕೆರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ ಮುಂಗಾರು ಮಳೆ ಕೊರತೆಯಾಗುವ ಸಂಭವವಿದ್ದು ರೈತರು ಕಡಿಮೆ ಅವಧಿಯ ರಾಗಿ ಬಿತ್ತನೆ ಮಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಲಭ್ಯವಿದೆ. ಕಡಿಮೆ ಅವಧಿಯ ರಾಗಿ ಬೆಳೆ ಬಗ್ಗೆ ಕೃಷಿ ಅಧಿಕಾರಿಗಳ ಬಳಿ ಮಾಹಿತಿ ಬಿತ್ತನೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿರುವ ರಾಗಿಗೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ, ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು

ಈ ಸಂಧರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಶಿವಕುಮಾರ್, ಎಸಿ ಮಂಜುನಾಥ್, ಕೃಷಿ ಜಂಟಿ ನಿರ್ದೇಶಕಿ ಕಲಾವತಿ, ಅಧಿಕಾರಿಗಳು ಉಪಸ್ಥಿತರಿದ್ದರು.

ದೊಡ್ಡಬಳ್ಳಾಪುರ ತಾಲ್ಲೂಕು – 2026-27ರ ಮುಂಗಾರು ಮಳೆ ಹಾಗೂ ಬೆಳೆ ಪರಿಸ್ಥಿತಿ
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಬಿತ್ತನೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿರುವುದಿಲ್ಲ.

  • ಮಳೆ ಪರಿಸ್ಥಿತಿ-2026ರ ಜೂನ್ 1ರಿಂದ ಆಗಸ್ಟ್ 4 ರವರೆಗೆ ಜಿಲ್ಲೆಯ ವಾಡಿಕೆ ನೈಋತ್ಯ ಮುಂಗಾರು ಮಳೆಯ ಪ್ರಮಾಣ 306.6 ಮಿ.ಮೀ. ಆಗಿದ್ದು, ಪ್ರಸ್ತುತ 272.1 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆ ಉಂಟಾಗಿದೆ.
  • ಬೆಳೆ ವಿಸ್ತೀರ್ಣ-ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಒಟ್ಟು ಬಿತ್ತನೆ ಗುರಿ 25833 ಹೆಕ್ಟೇರ್ ಆಗಿದ್ದು, ಇದುವರೆಗೆ 1429 ಹೆಕ್ಟೇ‌ರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು. ಇದು ಗುರಿಯ ಶೇ. 5.53ರಷ್ಟು ಮಾತ್ರವಾಗಿದೆ.
  • ಕಳೆದ ವರ್ಷದ ಇದೇ ಅವಧಿಯಲ್ಲಿ 17671 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಗುರಿಯ ಶೇ.68.41 ರಷ್ಟು ಪ್ರಗತಿ ಸಾಧಿಸಲಾಗಿತ್ತು.
  • ಬಿತ್ತನೆ ಬೀಜ ಲಭ್ಯತೆ-ಪ್ರಸ್ತುತ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ 914.93 ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದ್ದು, ಮುಂಗಾರು ಹಂಗಾಮಿಗೆ ರೈತರ ಬೇಡಿಕೆಗೆ ಅನುಗುಣವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜವನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ರೈತರಿಗೆ ಬೇಡಿಕೆಯಂತೆ ನಿರಂತರವಾಗಿ ಬಿತ್ತನೆ ಬೀಜವನ್ನು ವಿತರಿಸಲಾಗುತ್ತಿದೆ.
  • ರಸಗೊಬ್ಬರ ಲಭ್ಯತೆ- ತಾಲ್ಲೂಕಿನಲ್ಲಿ ವಿವಿಧ ವಿಧದ 2016 ಮೆಟ್ರಿಕ್ ಟನ್ ರಸಗೊಬ್ಬರಗಳು ಲಭ್ಯವಿದ್ದು, ರೈತರ ಅಗತ್ಯಕ್ಕೆ ತಕ್ಕಂತೆ ಸಮರ್ಪಕ ಪ್ರಮಾಣದಲ್ಲಿ ದಾಸ್ತಾನು ಇರಿಸಲಾಗಿದೆ.
  • ಜಾನುವಾರುಗಳಿಗೆ ಮೇವು ಲಭ್ಯತೆ- ತಾಲ್ಲೂಕಿನಲ್ಲಿ ಪ್ರಸ್ತುತ ಸುಮಾರು 87 ಸಾವಿರ ಟನ್ ಮೇವು ಲಭ್ಯವಿದ್ದು, ಇದು ಸುಮಾರು 39 ವಾರಗಳವರೆಗೆ ತಾಲ್ಲೂಕಿನ ಜಾನುವಾರುಗಳ ಮೇವಿನ ಅಗತ್ಯವನ್ನು ಪೂರೈಸುವಷ್ಟು ಸಾಕಾಗಿರುತ್ತದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles