16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ತೋಟದ ಹುನಗುಂದದಲ್ಲಿ ಬಸವಣ್ಣದೇವರ ನೂತನ ಶಿಲಾ ಮೂರ್ತಿ ಪ್ರತಿಷ್ಠಾಪನೆ..

ಶಿಗ್ಗಾಂವಿ: ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ದೇವಾಲಯ ಹಾಗೂ ಶ್ರೀ ಬಸವಣ್ಣದೇವರ ನೂತನ ಶಿಲಾ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಆ.23ರಿಂದ 25ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಆ.23ರಂದು ಶ್ರೀ ಬಸವಣ್ಣದೇವರ ನೂತನ ಶಿಲಾ ಮೂರ್ತಿಗೆ ಪೂರ್ವಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಆ.24ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಮ.ಹ.ಶ. ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಬಸವಣ್ಣದೇವರ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.


ಆ.25ರಂದು ಸಂಜೆ 5 ಘಂಟೆಗೆ ಪಾರ್ವತಿ-ಪರಮೇಶ್ವರ, ಗಣಪತಿ ಕಲಶಾರಾಧನೆ, ನವಗ್ರಹ ಶಾಂತಿ, ವಾಸ್ತುಶಾಂತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಬಸವಣ್ಣದೇವರಿಗೆ ರುದ್ರಾಭಿಷೇಕ, ನವಗ್ರಹ ಹವನ ಮತ್ತು ಪೂರ್ಣಾಹುತಿ ನೆರವೇರಲಿದೆ.


ಮಹೋತ್ಸವದ ಅಂಗವಾಗಿ ಶ್ರೀ ವೀರಭದ್ರೇಶ್ವರ ಗುಗ್ಗಳಕಾಯಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಠಾಧೀಶರು, ಸ್ವಾಮೀಜಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles