16.3 C
New York
Sunday, September 27, 2026

Buy now

ಸೇರಿಕೊಳ್ಳಿ
ನಮ್ಮೊಂದಿಗೆ ಸೇರಿ ಮತ್ತು ವರದಿಗಾರರಾಗಲು ಈಗಲೇ ನೋಂದಾಯಿಸಿ ಈಗಲೇ ಅರ್ಜಿ ಸಲ್ಲಿಸಿ

ಮಲ್ಲಿಕಾರ್ಜುನ ನಾಗಪ್ಪ ಅವರ ನಿವಾಸಕ್ಕೆ ಸಚಿವ ತಂಗಡಗಿ ಭೇಟಿ; ಪಕ್ಷ ಸಂಘಟನೆ, ಚುನಾವಣೆ ಕುರಿತು ಚರ್ಚೆ

ಕೊಪ್ಪಳ (ಗಂಗಾವತಿ): ಸೆ.20

ಮಾಜಿ ಸಚಿವರು ಹಾಗೂ ನೂತನ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರ ಗಂಗಾವತಿ ನಿವಾಸಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್.ಎಸ್. ತಂಗಡಗಿ ಅವರು ಭೇಟಿ ನೀಡಿ, ನೂತನ ಜವಾಬ್ದಾರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಸಚಿವರು ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಪಕ್ಷದ ಸಂಘಟನೆಯಲ್ಲಿ ಅವರ ಅನುಭವ ಮತ್ತು ಸೇವೆ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ಬಲ ನೀಡಲಿ ಎಂದು ಶುಭ ಹಾರೈಸಿದರು.

ಭೇಟಿಯ ವೇಳೆ ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮುನ್ನಡೆಸುವುದು, ಬೂತ್ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವುದು ಸೇರಿದಂತೆ ಹಲವು ಸಂಘಟನಾ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಮುಂಬರುವ ಜಿಪಂ, ತಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಸಜ್ಜುಗೊಳಿಸುವುದು, ಕ್ಷೇತ್ರವಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕುರಿತು ಇಬ್ಬರು ನಾಯಕರು ಸಮಾಲೋಚನೆ ನಡೆಸಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷದ ಸಂಘಟನೆಗೆ ಆದ್ಯತೆ ನೀಡಿ, ಹಿರಿಯರು, ಯುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಒಟ್ಟಾಗಿ ಮುನ್ನಡೆಯುವ ಅಗತ್ಯದ ಬಗ್ಗೆಯೂ ಚರ್ಚಿಸಲಾಯಿತು.
ಪಕ್ಷದ ಹಿತಾಸಕ್ತಿ ಹಾಗೂ ಸಂಘಟನೆಯ ಬಲವರ್ಧನೆಯೇ ಪ್ರಮುಖವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ಚುನಾವಣೆಯನ್ನು ಎದುರಿಸುವ ಕುರಿತು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
22,900SubscribersSubscribe
- Advertisement -spot_img

Latest Articles