ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದು, ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದರಿಂದ ಐದನೇ ತರಗತಿವರೆಗೆ ಬೋಧಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ. 6 ಮತ್ತು 7ನೇ ತರಗತಿ ಹಾಗೂ ಮುಂದುವರೆದ ತರಗತಿಗಳಿಗೆ ಟಿಇಟಿ ಅಗತ್ಯವೆಂದು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಮುಂದಿನ ಪ್ರಶ್ನೆಗಳು
ಟಿಇಟಿ ವಿನಾಯಿತಿ ಯಾರಿಗೆ ನೀಡಲಾಗಿದೆ ಮತ್ತು ಏಕೆ?
ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ಬಗ್ಗೆ ಬೇರೆ ನಿರ್ಣಯಗಳೇನು?
ಟಿಇಟಿ ವಿನಾಯಿತಿ ಪಡೆಯಲು ಯಾವ ಷರತ್ತುಗಳನ್ನು ಪೂರೈಸಬೇಕು?
ಟಿಇಟಿ ಪ್ರಮಾಣ ಪತ್ರದ ಬಗ್ಗೆ ಕಾನೂನು ಸಚಿವರ ಅಭಿಪ್ರಾಯವೇನು?

